Back to List

Upcomming Events Details

ಹಾಲಾಡಿ-ಶಂಕರನಾರಾಯಣ ಘಟಕದ ದಶಮಾನೋತ್ಸವ ಕಾರ್ಯಕ್ರಮ.


ಹಾಲಾಡಿ-ಶಂಕರನಾರಾಯಣ ಘಟಕದ ದಶಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಯಕ್ಷಗಾನ ಪ್ರದರ್ಶನ ಕಾರ್ಯಕ್ರಮವು ದಿನಾಂಕ 14.08.2016ರ ಭಾನುವಾರದಂದು ಹಾಲಾಡಿಯ ಶ್ರೀ ದುರ್ಗಾಪರಮೇಶ್ವರಿ ಕಲ್ಯಾಣ ಮಂಟಪದಲ್ಲಿ ನಡೆಯಿತು. ಈ ಕಾರ್ಯಕ್ರಮದ ಸಭಾ ಕಾರ್ಯಕ್ರಮವನ್ನು ಮೊಗವೀರ ಯುವ ಸಂಘಟನೆಯ ಮಾರ್ಗದರ್ಶಕರಾದ ನಾಡೋಜ ಡಾ.ಜಿ.ಶಂಕರ್ ರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು ಹಾಗೂ ಹಾಲಾಡಿ ಶಂಕರನಾರಾಯಣ ಘಟಕವು ಅತ್ಯಂತ ಗ್ರಾಮೀಣ ಘಟಕವಾಗಿದ್ದು, ಈ ಭಾಗದಲ್ಲಿ ಅತ್ಯುತ್ತಮ ಕೆಲಸಗಳನ್ನು ಮಾಡುವ ಮೂಲಕ ಮಾದರಿ ಘಟಕವಾಗಿದೆ ಎಂದು ತಿಳಿಸಿದರು. ಅತ್ಯಂತ ಹೆಚ್ಚು ರಕ್ತದಾನ ಶಿಬಿರಗಳನ್ನು ಆಯೋಜಿಸಿ ಗ್ರಾಮೀಣ ಭಾಗದಲ್ಲಿ ರಕ್ತದಾನಿಗಳ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಿಸುವಲ್ಲಿ ಶ್ರಮಿಸಿದ್ದಾರೆ. ಅಲ್ಲದೆ ಈ ದಶಮಾನೋತ್ಸವದ ಆಚರಣೆಯ ಮೂಲಕ ಗ್ರಾಮೀಣ ಭಾಗದಲ್ಲಿ ತನ್ನ ಅಸ್ತಿತ್ವವನ್ನು ಧೃಢ ಪಡಿಸಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕಾಧ್ಯಕ್ಷರಾದ ಜಗದೀಶ್ ಮೊಗವೀರ ವಹಿಸಿದ್ದರು ಹಾಗೂ ಮುಖ್ಯ ಅತಿಥಿಗಳಾಗಿ ಶ್ರೀ ಆನಂದ್ ಸಿ.ಕುಂದರ್, ಉದ್ಯಮಿಗಳು ಕೋಟ, ಮೊಗವೀರ ಯುವ ಸಂಘಟನೆಯ ಜಿಲ್ಲಾಧ್ಯಕ್ಷರಾದ ಶ್ರೀ ಗಣೇಶ್ ಕಾಂಚನ್, ಶ್ರೀ ಬಿ.ಎನ್.ನರಸಿಂಹ, ಶ್ರೀ ಮಹಾಬಲ ಕುಂದರ್ ಮುಂಬೈ, ಶ್ರೀ ಎಂ.ಎಂ.ಸುವರ್ಣ, ಶ್ರೀ ಕೆ.ಕೆ.ಕಾಂಚನ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಹತ್ತು ವರ್ಷಗಳಿಂದ ಘಟಕದಲ್ಲಿ ಅಧ್ಯಕ್ಷರಾಗಿ, ಕಾರ್ಯದರ್ಶಿಗಳಾಗಿ ಮತ್ತು ಪದಾಧಿಕಾರಿಗಳಾಗಿ ಸೇವೆ ಸಲ್ಲಿಸಿದವರನ್ನು ಸ್ಮರಣಿಕೆ ನೀಡಿ ಗೌರವಿಸಲಾಯುತು. ಹಾಗೆಯೇ ಘಟಕದಲ್ಲಿ ಸೇವೆ ಸಲ್ಲಿಸಿ ಪ್ರಸ್ತುತ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಶ್ರೀ ಗಣೇಶ್ ಕಾಂಚನ್ ಹಾಗೂ ತಾಲೂಕು ಪಂಚಾಯತದ ಅಧ್ಯಕ್ಷರಾದ ಶ್ರೀಮತಿ ಜಯಶ್ರೀ ಮೊಗವೀರ, ಮತ್ತು ಯಕ್ಷಗಾನ ಭಾಗವತರಾದ ಶ್ರೀ ಸದಾಶಿವ ಅಮೀನ್ ಅವರನ್ನು ಸನ್ಮಾನಿಸಲಾಯಿತು.
🕔24 October 2016