ಪ್ರಶಸ್ತಿಗಳು


ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ -2010

ನಮ್ಮ ಸಂಘದ ಕಾರ್ಯಚಟುವಟಿಕೆಗಳನ್ನು ಪರಿಗಣಿಸಿದ ಕರ್ನಾಟಕ ಸರಕಾರವು ಸಮಾಜಕ್ಕೆ ಸಲ್ಲಿಸಿದ ಅನನ್ಯ ಸೇವೆಗಾಗಿ 2010 ನೇ ಸಾಲಿನ ರಾಜ್ಯೋತ್ಸವ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಿರುತ್ತಾರೆ. ದಿನಾಂಕ: 01-11-2010 ರ ಸೋಮವಾರ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ನಮ್ಮ ಸಂಘಟನೆಯ ಜಿಲ್ಲಾ ಅಧ್ಯಕ್ಷರಾದ ಶ್ರೀ ಸತೀಶ್ ಎಂ. ನಾಯ್ಕ್ ರವರು ಈ ಪ್ರಶಸ್ತಿಯನ್ನು ಸಂಘಟನೆಯ ಪರವಾಗಿ ಸ್ವೀಕರಿಸಿದರು.

ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ-2010 ನ್ನು ಮೊಗವೀರ ಯುವ ಸಂಘಟನೆಯ ಪರವಾಗಿ ಸ್ಥಾಪಕ ಅಧ್ಯಕ್ಷರಾದ ಸತೀಶ್ ಅಮೀನ್ ಪಡುಕರೆಯವರು ಸ್ವೀಕರಿಸಿರುತ್ತಾರೆ.